Monday, October 12, 2026

ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು; ಮುಂಬೈ ಆಸ್ಪತ್ರೆಗೆ ದಾಖಲು

by September 1, 2026

ಮುಂಬೈ: ಸಮಾಜಸೇವಕ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಆಪ್ತ ಸಹಾಯಕರು ಮಂಗಳವಾರ ತಿಳಿಸಿದ್ದಾರೆ.

ಹಜಾರೆ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಸಮಗ್ರವಾಗಿ ಪರಿಶೀಲಿಸುತ್ತಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ವರದಿಗಳು ಆಧಾರದ ಮೇಲೆ ಮುಂದಿನ ಚಿಕಿತ್ಸಾ ಕ್ರಮವನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

89 ವರ್ಷದ ಹಜಾರೆ ಅವರು ವೈರಲ್ ಸೋಂಕು ಹಾಗೂ ತೀವ್ರ ನಿರ್ಜಲೀಕರಣದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೋಮವಾರ ಅಹಿಲ್ಯಾನಗರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮುಂಬೈಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published.

ಇನ್ನಷ್ಟು…

Archives

Search by Date

October 2026
M T W T F S S
 1234
567891011
12131415161718
19202122232425
262728293031  

Latest from Blog