Monday, October 12, 2026

ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ 3,200 ರೈತರಿಗೆ ಪರಿಹಾರ: ನಿವೇಶನ ಹಂಚಿಕೆ ಆರಂಭ

by September 1, 2026

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಭೂಮಿ ನೀಡಿದ 3,200 ರೈತರಿಗೆ ಪರಿಹಾರದ ರೂಪದಲ್ಲಿ 18,399 ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಕ್ರಿಯೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ನಗರದ ಹೊರವಲಯದ ತಾರಾಲಯ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂ ಮಾಲೀಕರಿಗೆ 3 ಕೋಟಿ ಚದರ ಅಡಿ ವಿಸ್ತೀರ್ಣದ ಜಾಗವನ್ನು ಹಂಚಿಕೆ ಮಾಡಲಾಯಿತು. ಈ ವೇಳೆ 20 ಭೂ ಮಾಲೀಕರಿಗೆ ಡಿ.ಕೆ. ಶಿವಕುಮಾರ್ ಅವರು ಸಾಂಕೇತಿಕವಾಗಿ ಹಂಚಿಕೆ ಪತ್ರಗಳನ್ನು ವಿತರಿಸಿದರು. ಉಳಿದವರಿಗೆ ಕಂಟರ್‌ಗಳ ಮೂಲಕ ವಿತರಣೆ ಪ್ರಕ್ರಿಯೆ ನಡೆಯಲಿದೆ.

ಶಿವರಾಮ ಕಾರಂತ ಬಡಾವಣೆ – ಸಾಂದರ್ಭಿಕ ಚಿತ್ರ

ಬಡಾವಣೆಯಲ್ಲಿ ಒಟ್ಟು 2,815 ನಿವೇಶನಗಳ ಹಂಚಿಕೆ ಕಾರ್ಯವನ್ನು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವ ಮೂಲಕ ಆರಂಭಿಸಲಾಗಿದ್ದು, ಪ್ರತಿ ಚದರ ಅಡಿಗೆ ₹6,000 ದರ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, “ಮೂರು ವರ್ಷಗಳಲ್ಲೇ ಪರಿಹಾರ ನೀಡುವ ಪ್ರಯತ್ನ ಮಾಡಿದ್ದೇವೆ. ನ್ಯಾಯಾಲಯದ ತಡೆಯಾಜ್ಞೆ ನಿವಾರಣೆಯಾದ ಬಳಿಕ ಶಿವರಾಮ ಕಾರಂತ ಬಡಾವಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು ಸಾಧ್ಯವಾಗಿದೆ” ಎಂದು ಹೇಳಿದರು. ನಿವೇಶನ ಹಂಚಿಕೆಗೆ ಅರ್ಜಿ ಹಾಕಲು ಆನ್‌ಲೈನ್ ಮೂಲಕ ಅವಕಾಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕೌಂಟರ್‌ಗಳಲ್ಲೂ ವಿತರಣೆ ನಡೆಯಲಿದೆ. ಸರ್ಕಾರಕ್ಕೆ ಪ್ರತಿ ವರ್ಷ ₹1,000 ಕೋಟಿ ನಷ್ಟವಾಗುತ್ತಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಗೆ ಬೇಡಿಕೆ ಹೆಚ್ಚುತ್ತಿದ್ದು, ಬಡಾವಣೆ ನಿರ್ಮಾಣಕ್ಕಾಗಿ ಭೂಮಿ ನೀಡಿದವರಿಗೆ ಪರಿಹಾರ ನೀಡುವ ಪ್ರಕ್ರಿಯೆ ಮುಂದುವರಿದಿದೆ. ಕೆಂಪೇಗೌಡ ಕಣಿವೆ ಸೇರಿದಂತೆ ವಿವಿಧ ಭಾಗಗಳ ರೈತರು ಹಾಗೂ ಭೂ ಮಾಲೀಕರಿಗೆ ಇದರಿಂದ ಅನುಕೂಲವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಜನಸಂಖ್ಯೆ ಹೆಚ್ಚಳಕ್ಕೆ ಅನುಗುಣವಾಗಿ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರದ ಅಂದಾಜಿನ ಪ್ರಕಾರ ಮುಂದಿನ ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ 1.40 ಕೋಟಿಗೆ ತಲುಪುವ ಸಾಧ್ಯತೆಯಿದ್ದು, ಅದಕ್ಕೆ ತಕ್ಕಂತೆ ನಗರಾಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ.

Leave a Reply

Your email address will not be published.

ಇನ್ನಷ್ಟು…

Archives

Search by Date

October 2026
M T W T F S S
 1234
567891011
12131415161718
19202122232425
262728293031  

Latest from Blog